April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

ಉಜಿರೆ: ಮನುಷ್ಯನ ಬದುಕಿನ ಅವಿಭಾಜ್ಯ ಅಂಗ ಮನಸ್ಸು. ಮನಸ್ಸು ಸ್ಥಿಮಿತದಲ್ಲಿ ಇಲ್ಲವಾದಲ್ಲಿ ಕಾಯಿಲೆ ಬರುವುದು, ಕೋಪ, ಹಠ, ಸಿಟ್ಟು ಮುಂತಾದ ಅನೇಕ ಸಮಸ್ಯೆಗಳು ಬರುವುದರಿಂದ ಜೀವನದಲ್ಲಿ ದೇಹದ ಆರೋಗ್ಯ ಕಾಪಾಡುವುದಕ್ಕಿಂತಲೂ ಮನಸ್ಸಿನ ಆರೋಗ್ಯ ಕಾಪಾಡುವುದು ಅಗತ್ಯ ಎಂದು ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಮೇಘನಾ ಅಭಿಪ್ರಾಯಪಟ್ಟರು.


ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಸೆ. 20 ರಂದು ಇಲ್ಲಿನ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪರೋಪಕಾರ ಮತ್ತು ನಿಸ್ವಾರ್ಥ ಸೇವೆಯಿಂದ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು. ಜೊತೆಗೆ, ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಮಾಡುವುದರಿಂದ ಮನಸ್ಸನ್ನು ಸ್ಥಿಮಿತದಲ್ಲಿ ಇಟ್ಟುಕೊಳ್ಳಬಹುದು ಎಂದು ಅವರು ತಿಳಿಸಿದರು.
ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಾದ ದಿವ್ಯಾ, ಸಂಗೀತ ಮತ್ತು ಸಿಂಧು ಮಹಿಳೆಯರ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಮ ಹಾಗೂ ಉಲ್ಲಾಸ್ ಎಂ.ಆರ್. ಯೋಗದ ಮಹತ್ವದ ಮಾಹಿತಿ ನೀಡಿದರು.


ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇಂಗ್ಲಿಷ್ ಉಪನ್ಯಾಸಕ ಸಚಿನ್ ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!