April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಬೆಳಾಲು : ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯನ್ನು ಇತ್ತೀಚೆಗೆ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ರಾಮಕೃಷ್ಣ ಭಟ್ ಬೆಳಾಲು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಧರ್ಮಸ್ಥಳ ವಲಯ ಮೇಲ್ವಿಚಾರಕಿ ಕುಮಾರಿ ಲಲಿತ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಯಶೋಧ, ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಅಧ್ಯಕ್ಷೆ ಶ್ರೀಮತಿ ಮಧುರ, ಮಾಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಾನ್ಸಿ ಮತ್ತು ಯೋಗೇಶ್ ಭಾಗವಹಿಸಿದರು.

ಶ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಸಂಜೀವಿನಿ ಸಂಘದ ಸದಸ್ಯರು, ಗೊಂಚಲು ಅಧ್ಯಕ್ಷೆ ಶ್ರೀಮತಿ ಗೀತಾ ಭಾಗವಹಿಸಿದರು. ಎಂಬಿಕೆ ಶ್ರೀ ಶಕ್ತಿ ಸಂಘದ ಸದಸ್ಯೆ ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೋಕಮ್ಮ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ, ಕೃಷಿ ಸಖಿ ಶ್ರೀಮತಿ ಸ್ವಾತಿ, ಪಶು ಸಖಿ ಶ್ರೀಮತಿ ಯಶೋಧ ಶ್ರೀಮತಿ ಸುಕನ್ಯಾ ನಾರಾಯಣ ಸುವರ್ಣ ಸಹಕರಿಸಿದರು. ಅಂಗನವಾಡಿ ಮಕ್ಕಳು ಭಾಗವಹಿಸಿದ್ದರು.

Related posts

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!