32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಶ್ರೀಮತಿ ಶ್ರುತಿ ಮನಕೀಕರ್ ಆಗಮಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿಂದಿ ದಿವಸದ ಮಹತ್ವ, ಹಿಂದಿ ಲಿಪಿ ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಮತ್ತು ಎಲ್ಲರೂ ಒಂದೇ ಎಂಬ ಭಾವದಿಂದ, ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು, ಭ್ರಾತೃತ್ವದಿಂದ, ದೇಶದ ಗೌರವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಪ್ರತಿಜ್ಞೆ ಬೋಧಿಸಿದರು. ಹಿಂದಿ ಪ್ರಬಂಧ ರಚನೆಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಕುಮಾರಿ ನಿವೇದ್ಯಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕುಮಾರಿ ಸಿಂಧೂರ ಸ್ವಾಗತಿಸಿ, ಕುಮಾರಿ ಶ್ರೇಷ್ಠ ಅತಿಥಿಗಳನ್ನು ಪರಿಚಯಿಸಿ, ಕುಮಾರಿ ಕಲ್ಪಿತಾ ಧನ್ಯವಾದ ಸಮರ್ಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಹಿಂದಿ ಶಿಕ್ಷಕಿಯರಾದ ಶ್ರೀಮತಿ ಮಮತಾ ಮತ್ತು ಶ್ರೀಮತಿ ಅಮೃತಾ ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಹಿಂದಿ ಭಾಷೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya
error: Content is protected !!