ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ (ಸೆ.21) ಇಂದಿನಿಂದ ಸೆಪ್ಟೆಂಬರ್25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ತಿಳಿಸಲಾಗಿದೆ.
ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ವೇದಿಕೆ ಮೇಲೆ ಇರಬಾರದು ಮತ್ತು ಚುನಾಯಿತ ಪ್ರತಿನಿಧಿಗಳು ಯಾವುದೇ ರೀತಿಯ ಚರ್ಚೆಯಲ್ಲಿ ಪಾಲ್ಗೊಳ್ಳಬಾರದು. ಸದಸ್ಯರಿಗೆ ಯಾವುದೇ ರೀತಿಗೆ ಉಡುಗೊರೆಯಾಗಲೀ ಟೋಕನ್ ಆಗಲಿ ನೀಡಬಾರದು. ಒಂದು ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟ ಆಡಳಿತ ಮಂಡಳಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜವಾಬ್ದಾರರಾಗಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.