April 2, 2025
ಪ್ರಮುಖ ಸುದ್ದಿ

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದರ ವಿರುದ್ಧ ಅಟ್ರಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ :ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ‌ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಸೆ 22. ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದರು

ಈ ಸಂದರ್ಭದಲ್ಲಿಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಓಡಿಳ್ನಾಳ, ಸಂಘದ ಸದಸ್ಯರಾದ ಸಂತೋಷ್ ನಾರಾವಿ, ಮಾಜಿ ಅಧ್ಯಕ್ಷರಾದ ಸೇಸಪ್ಪ ಅಳದಂಗಡಿ, ಹಿರಿಯ ದೈವ ನರ್ತಕರಾದ ವೀರಪ್ಪ ಈದು, ಗಿರಿಯಪ್ಪ ಎಡ್ತೂರು, ಗೋಪಾಲ ಕೇಲ, ನಾರಾಯಣ ವೇಣೂರು, ಬಾಬು ಪೊಸಲಾಯ ಕಾಂತಪ್ಪ ಪೆರಿಂಜೆ, ರಮೇಶ್‌ ಪೆರಿಂಜೆ, ಪ್ರಮುಖರಾದ ಗಣೇಶ್ ಕೋಟ್ಯಾನ್ ಚಾರ್ಮಾಡಿ, ಹರೀಶ್ ನಾವೂರು, ಶೇಖರ್ ವಾಲ್ಪಾಡಿ, ಸಂಪತ್ ವಾಲ್ಪಾಡಿ, ನಾಗೇಶ್ ಉಡುಪಿ, ರವಿ ಎಂ.ಎಲ್ ಮುಂಡಾಜೆ, ಜಯಂತ ಈದು ಮತ್ತು ನಲಿಕೆ ಸಮಾಜ ಬಂಧುಗಳು ಉಪಸ್ಥಿತರಿದ್ದರು

.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!