23.3 C
ಪುತ್ತೂರು, ಬೆಳ್ತಂಗಡಿ
May 18, 2025
ಧಾರ್ಮಿಕ

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್: 26ನೇ ವರ್ಷದ ಭಜನಾ ತರಬೇತಿ ಕಮ್ಮಟ ಉದ್ಘಾಟನೆ

ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ
26ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.22ರಂದು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಜೈನಮಠ, ಮೂಡಬಿದ್ರೆಯ ಡಾ|| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಭಜನಾ ಕಮ್ಮಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು ಕಾರ್ಯಕ್ರಮದಲ್ಲಿ

ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಮಹಾ ಲಕ್ಷ್ಮೀ ಸೇವಾ ಪ್ರತಿಷ್ಠಾನ, ಶ್ರೀಧಾಮ, ಮಾಣಿಲ ದಿವ್ಯ ಸಾನಿಧ್ಯ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಾತೃಶ್ರೀ ಡಾ|| ಹೇಮಾವತಿ ವೀ. ಹೆಗ್ಗಡೆಯವರು ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌, ಡಿ. ಹರ್ಷೇಂದ್ರ ಕುಮಾರ್ ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಸುಪ್ರೀಯ ಹಷ೯ಂದ್ರ ಕುಮಾರ್ ಭಾಗವಹಿಸಿದ್ದರು. ಭಜನಾ ಕಮ್ಮಟದ ಕಾಯ೯ದಶಿ೯ ಎಂ.ವಿ.ಶೆಟ್ಟಿ, ವರದಿ ವಾಚಿಸಿದರು.

ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾದೇಶಿಕ ಭಜನಾ ಪರಿಷತ್ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ , ಉಪಾಧ್ಯಕ್ಷ ರಾಜೇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕು.ಸುಪ್ರೀತಾ ಮತ್ತು ಮಾ. ವಚ೯ಸ್ ಇವರ ಪ್ರಾಥ೯ನೆ, ನೃತ್ಯರೂಪಕದ ಮೂಲಕ ಪ್ರಾಥ೯ನೆಯನ್ನು ವಿದುಷಿ ಶ್ರೀಮತಿ ಚೈತ್ರ ತಂಡದವರು ನೇರವೇರಿಸಿದರು.
ಭಜನಾ ಪರಿಷತ್ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ್ ರಾವ್ ವಂದಿಸಿದರು. ಡಾ.ಐ.ಶಶಿಕಾಂತ್ ಜೈನ್ ಸ್ವಸ್ತಿಮಂತ್ರ ಪಠಿಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya
error: Content is protected !!