25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸುತ್ತಿರುವ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ, “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ (ವಿ.ಕೆ. ವಿಟ್ಲ)ರವರಿಗೆ ಅ.2ರಂದು ನಾಗರಿಕ ಅಭಿನಂದನಾ ಸಮಾರಂಭವು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವ ಸಲಹೆಗಾರರಾದ ಗಂಗಾಧರ ರಾವ್ ಕೇವುದೇಲು, ಟಿ. ರಾಮ್ ಭಟ್, ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ನಾಗರಿಕ ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ ಬಂಗೇರ, ಅಧ್ಯಕ್ಷ ಸಂಪತ್ ಬಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ಧರಣೇಂದ್ರ ಕೆ. ಜೈನ್, ಪ್ರಧಾನ ಸಂಚಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya
error: Content is protected !!