38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸುತ್ತಿರುವ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ, “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ (ವಿ.ಕೆ. ವಿಟ್ಲ)ರವರಿಗೆ ಅ.2ರಂದು ನಾಗರಿಕ ಅಭಿನಂದನಾ ಸಮಾರಂಭವು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವ ಸಲಹೆಗಾರರಾದ ಗಂಗಾಧರ ರಾವ್ ಕೇವುದೇಲು, ಟಿ. ರಾಮ್ ಭಟ್, ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ನಾಗರಿಕ ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ ಬಂಗೇರ, ಅಧ್ಯಕ್ಷ ಸಂಪತ್ ಬಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ಧರಣೇಂದ್ರ ಕೆ. ಜೈನ್, ಪ್ರಧಾನ ಸಂಚಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya
error: Content is protected !!