April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ.

ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು ಮಧ್ಯಾಹ್ನ, ತನ್ನ ಬಾಬ್ತು ಕೆಎ 19 ಹೆಚ್ ಎಮ್ 3013 ನೇ ಬೈಕ್ (ಮೋಟಾರ್ ಸೈಕಲ್)ನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಮೋಟಾರ್ ಸೈಕಲ್ ನಿಲ್ಲಿಸಿದ ಸ್ಥಳದಲ್ಲಿ ಸಂತೋಷ್ ರವರು ಬಂದು ನೋಡಿದಾಗ ಅಂದಾಜು ರೂ 68,000/ ಮೌಲ್ಯದ ಮೋಟಾರ್ ಸೈಕಲ್ ನಾಪತ್ತೆಯಾಗಿದ್ದು,. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ.

ಸದ್ರಿ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 81/2024 ಕಲಂ: 303(1) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya
error: Content is protected !!