24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

ಬೆಳ್ತಂಗಡಿ :ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘದ ರಾಜ್ಯ ಸಮಿತಿ‌ಸಭೆಯಲ್ಲಿ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಲಾಗಿದ್ದು ಅದರಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಬೆಳ್ತಂಗಡಿ ತಹಶೀಲ್ದಾರ್ ಅವರ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸೆ.23 ರಂದು ಸೋಮವಾರ ಸಂಜೆ ಸರಕಾರಕ್ಕೆ ಮನವಿ ಸಲ್ಲಿಸಿದರು.

ಮೊಬೈಲ್ ಆಪ್ ಮೂಲಕ ಕೆಲಸ‌ಮಾಡಲು ಸೂಕ್ತ ವ್ಯವಸ್ಥೆಗಳನ್ನು ಕಲ್ಪಸದ ಕಾರಣ ಹಲವು ಸಮಸ್ಯೆಗಳಾಗುತ್ತಿರುವ ಬಗ್ಗೆ ಕಚೇರಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ, ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದೆ ಸಮಿತಿ ಇಟ್ಟಿದ್ದು ಈ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!