26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

ಅರಸಿನಮಕ್ಕಿ: ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಎಂ.(18) ನಾಪತ್ತೆಯಾಗಿರುವ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂದಗತಿ ಚಟುವಟಿಕೆಯವನಾಗಿರುವ ತೀರ್ಥೇಶ್ ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದು, ಸೆ.21ರಂದು ಕೂಡ ಬಸ್‌ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ ಕಾಯುತ್ತಿರುವುದನ್ನು ಇನ್ನೋರ್ವ ವಿದ್ಯಾರ್ಥಿ ರಾಹುಲ್ ಎಂಬಾತ ನೋಡಿರುವ ಮಾಹಿತಿ ಲಭಿಸಿದೆ. ಎಲ್ಲ ಕಡೆ ಹುಡುಕಾಡಿದರೂ ಮಗನ ಸುಳಿವು ಲಭಿಸಿಲ್ಲ. ಆತನನ್ನು ಪತ್ತೆ ಮಾಡಿಕೊಡಬೇಕೆಂದು ಅರಸಿನಮಕ್ಕಿಯ ಪಡ್ಡಾಯಿಬೆಟ್ಟು ನಿವಾಸಿಯಾಗಿರುವ ತಂದೆ ಎಂ.ವಿಜಯಚಂದ್ರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya
error: Content is protected !!