ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

ಉಜಿರೆ: ಸಂಸ್ಕೃತ ಭಾಷಾ ಸಾಹಿತ್ಯವು ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಮಾತ್ರವಲ್ಲದೆ ಇತರ ದೇಶಗಳಲ್ಲಿಯೂ ಪ್ರಸಿದ್ಧವಾದವು. ಭಾಷೆಯೊಂದಿಗೆ ಸಾಹಿತ್ಯ ಬೆಳೆಯಬೇಕಾದರೆ ಆದಷ್ಟು ಸಂಸ್ಕೃತ ವಾತಾವರಣ ನಿರ್ಮಾಣ ಆಗಬೇಕು. ಸಂಸ್ಕೃತದ ಆದರ್ಶ ಮೌಲ್ಯಗಳನ್ನು ಎಲ್ಲ ವಿದ್ಯಾರ್ಥಿಗಳಲ್ಲಿ ಮೊದಲು ಒಡಮೂಡಿಸುವಂತಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ತಿಳಿಸಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘ , ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ನಡೆದ ಒಂದು ದಿನದ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ಪ್ರಶಿಕ್ಷಣ ಗೋಷ್ಠಿಗಳು ನಡೆದವು . ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ಕಲಾ ನಿಕಾಯದ ಡೀನ್ ಆಗಿರುವ ಡಾ. ಎನ್. ಶ್ರೀಧರ ಭಟ್ ಅವರು ಭಾಣ ಭಟ್ಟನ ಕಾದಂಬರಿ ವಿಷಯದ ಬಗ್ಗೆ , ಶೃಂಗೇರಿಯ ಸರಕಾರಿ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಡಾ. ಮಹೇಶ ಕಾಕತ್ಕರ್ ಅವರು ಭಾಸನ ಬಾಲಚರಿತಮ್ ನಾಟಕದ ಬಗ್ಗೆ ಹಾಗೂ ಧರ್ಬೇತ್ತಡ್ಕದ ಶ್ರೀ ಶಂಕರ ವೇದವಿದ್ಯಾ ಗುರುಕುಲದ ಪ್ರಾಚಾರ್ಯ ವೇದಮೂರ್ತಿ ಆಂಶುಮಾನ್ ಅಭ್ಯಂಕರ ಅವರು ಭೋಜನ ಚಂಪೂ ರಾಮಾಯಣದ ಬಗ್ಗೆ ವಿಷಯಗಳನ್ನು ಪ್ರಸ್ತುತಪಡಿಸಿದರು. ಇದೇ ಸಂದರ್ಭದಲ್ಲಿ
ಸಂಸ್ಕೃತ ಭಾಷಾ ಪಠ್ಯ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ಚರ್ಚೆ ನಡೆಯಿತು.

ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪ.ಪೂ ಕಾಲೇಜಿನ ಪ್ರಾಚಾರ್ಯ ವೆಂಕಟಕೃಷ್ಣ ಶರ್ಮಾ ಅವರು ಕಾರ್ಯಾಗಾರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮ ಸಂಯೋಜಕ ಹಾಗೂ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ವೆಂಕಟರಮಣ ಭಟ್ ನಿರೂಪಿಸಿ , ಪ್ರಧಾನ ಕಾರ್ಯದರ್ಶಿ ಡಾ. ಮಧುಕೇಶ್ವರ ಶಾಸ್ತ್ರಿ ವಂದಿಸಿದರು.
ದ.ಕ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!