April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

ತೆಕ್ಕಾರು: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಳೆದ ಆರ್ಥಿಕ ವರ್ಷದಲ್ಲಿ 102 ಕೋಟಿ ರೂ. ವ್ಯವಹಾರ ನಡೆಸಿ, 32 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು ಎಂದು ನಿದೇರ್ಶಕ ಶಿವಪ್ಪ ಪೂಜಾರಿ ಹೇಳಿದರು.

ಸೆ.21ರಂದು ತೆಕ್ಕಾರು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ನಿರ್ದೇಶಕರಾದ ಹುಸೈನ್, ಅಬ್ದುಲ್ ರಹಿಮಾನ್, ಅಬ್ದುಲ್ ಮುನೀರ್, ಸಂಗೀತಾ, ರವಿ ಹಾಗೂ ಜನಾರ್ದನ ಪೂಜಾರಿ ಮತ್ತು ವಲಯ ಮೇಲ್ವಿಚಾರಕ ಸಿರಾಜುದ್ದಿನ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ ವಾರ್ಷಿಕ ವರದಿಯ ಮಂಡಿಸಿದರು. ಗುಮಾಸ್ತೆ ಶಾಹಿದಾ ಬಾನು ಸ್ವಾಗತಿಸಿ, ವೃತ್ತಿ ಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್ ವಂದಿಸಿದರು. ದೇವಿಪ್ರಸಾದ್ ನಿರೂಪಿಸಿದರು.
ಸಿಬ್ಬಂದಿಗಳಾದ ಪ್ರೇಮಾ, ಉಸ್ಮಾನ್ ಹಾಗೂ ನವೀಶ ಸಹಕರಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya
error: Content is protected !!