23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

ಅಳದಂಗಡಿ: ವರದಿ ಸಾಲಿನಲ್ಲಿ ಸಂಘವು ರೂ 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.1.54ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ ಎಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಹೇಳಿದರು.

ಅವರು ಅಳದಂಗಡಿ ಶ್ರೀಗುರು ಸಭಾಭವನದಲ್ಲಿ ನಡೆದ ಅಳದಂಗಡಿ ಸಿಎ ಬ್ಯಾಂಕಿನ ಮಹಾಸಭೆಯಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ ಮತ್ತು ಕೃಷಿಯೇತರ ಸಾಲಗಳ ಬೇಡಿಕೆಗೆ ನಿರಂತರವಾಗಿ ಸ್ಪಂದನೆ ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ, ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ, ಕೊರಗಪ್ಪ, ಸುಂದರಿ ,ಮಮತಾ, ಧರ್ಣಪ್ಪ, ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾರವರು 2023-24 ನೇ ಸಾಲಿನ ವಾರ್ಷಿಕ ವರದಿ ಜಮಾ ಖರ್ಚು ಹಾಗೂ ಲೆಕ್ಕಪತ್ರಗಳನ್ನು ಸಭೆಗೆ ಮಂಡಿಸಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ‌ಕೆ, ದೇಜಪ್ಪ ಪೂಜಾರಿ ಹಾಗೂ ಮಾಜಿ ಅಧ್ಯಕ್ಷರುಗಳು, ರೈತ ಸದಸ್ಯರು ಉಪಸ್ಥಿತರಿದ್ದರು.

ಸಂಘದ ನೌಕರರ ವೃಂದ ಸತೀಶ್ ಕೆ,ಪ್ರಶಾಂತ್ ಎಸ್,ಭರತ್ ರಾಜ್,ಜಗದೀಶ್ ಶೆಟ್ಟಿ ಎನ್,ಮಮತಾ,ಸಂತೋಷ್ ಎ,ಹರೀಶ್ ನಾಯ್ಕ,ಯತೀಶ್, ದಿನೇಶ್, ಪ್ರವೀಣ, ಶ್ರೀದೇವಿ, ಸುಮಲತಾ, ಕಿರಣ್, ಡೀಕಯ್ಯ, ಜಯಾನಂದ ಹಾಗೂ ಪಿಗ್ಮಿ ಸಂಗ್ರಾಹಕರು ಸಹಕರಿಸಿದರು.

Related posts

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!