ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.


ಕಳೆಂಜ ಗ್ರಾಮದ 309 ಸರ್ವೆ ನಂಬರ್ ನಲ್ಲಿ ದಶಕಗಳಿಂದ ವಾಸಿಸುತ್ತಾ ಬಂದಿರುವ ಜನರು ಜಮೀನು ಹಕ್ಕು ಪತ್ರ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಈ ಹಿಂದೆ ಅಂದು ಶಾಸಕರಾಗಿದ್ದ ವಸಂತ ಬಂಗೇರ ಅವರು ಕೆಲವು ಕುಟುಂಬಗಳಿಗೆ ಅಕ್ರಮ ಸಕ್ರಮ ಸಮಿತಿಯಲ್ಲಿ ಜಮೀನು ಮಂಜೂರು ಮಾಡಿದ್ದರೂ ಹಕ್ಕು ಪತ್ರ ಲಭಿಸಿರಲಿಲ್ಲ. ಸದ್ರಿ ಸರ್ವೆ ನಂಬರ್ ನಲ್ಲಿ ಅರಣ್ಯ ಇಲಾಖೆಯ ಜಮೀನು ಹಾಗೂ ಕಂದಾಯ ಇಲಾಖೆಯ ಜಮೀನನ್ನು ಪ್ರತ್ಯೇಕಿಸದ ಕಾರಣದಿಂದಾಗಿ ಹಕ್ಕುಪತ್ರ ಪಡೆಯಲು ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ 309ಸರ್ವೆ ನಂಬರ್ ನಲ್ಲಿ ಇರುವ ಜಮೀನಿನ ಜಂಟಿ ಸರ್ವೆಯನ್ನು ಸಾಧ್ಯವಾದಷ್ಟು ವೇಗವಾಗಿ ಪೂರ್ಣಗೊಳಿಸಿ ಕೊಡುವಂತೆ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಹಾಗೂ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಅಗತ್ಯ ಕ್ರಮ ಕೈಗೊಂಡು ಹಕ್ಕುಪತ್ರ ಲಭಿಸಲು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಅರಣ್ಯ ಇಲಾಖೆಯ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಅಧಿಕಾರಿಗಳು ಸಾಧ್ಯವಾದಷ್ಟು ವೇಗವಾಗಿ ಸರ್ವೆ ಕಾರ್ಯವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
ನಿಯೋಗದಲ್ಲಿ ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ, ಕೇಂದ್ರ ಸಮಿತಿ ಸದಸ್ಯ ಜಾರ್ಜ್, ಧರ್ಮಸ್ಥಳ ವಲಯ ಸಮಿತಿ ಅಧ್ಯಕ್ಷ ಜೈಸನ್ ಪಟ್ಟೇರಿ, ಮುಖಂಡ ಜೋಮೆಟ್ ಕಳೆಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!