27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಮುಖ್ಯ ಅತಿಥಿಗಳಾದ ಪಶು ವೈದ್ಯ ಯತೀಶ್ ರವರು ವಿದ್ಯಾರ್ಥಿಗಳಿಗೆ ರೇಬಿಸ್ ರೋಗ ಹಾಗೂ ಅವುಗಳ ವಿಧಗಳು ,ಕಾಯಿಲೆಯು ಯಾವ ರೀತಿ ಬರುತ್ತದೆ .ನಾಯಿ ಮತ್ತು ಇತರ ಪ್ರಾಣಿಗಳ ಕಚ್ಚುವಿಕೆಯಿಂದ ರೋಗ ಹೇಗೆ ಉಂಟಾಗುತ್ತದೆ, ಪ್ರಾಣಿಗಳಲ್ಲಿ ಯಾವ ರೀತಿ ಕಾಯಿಲೆಯನ್ನು ಪತ್ತೆ ಹಚ್ಚಬಹುದು ಹಾಗೂ ಅದನ್ನು ತಡೆಗಟ್ಟುವಿಕೆ ಮತ್ತು ಅದಕ್ಕೆ ಬೇಕಾದ ಲಸಿಕೆಗಳು ಎಂಬಿತ್ಯಾದಿ ವಿಚಾರಗಳ ಕುರಿತು ಹಲವು ಉದಾಹರಣೆ ಹಾಗೂ ಪಿಪಿಟಿ ಮುಖಾಂತರ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಬಳಿಕ ವಿದ್ಯಾರ್ಥಿಗಳ ಪ್ರಶ್ನೋತ್ತರ ಮುಖಾಂತರ ತಮ್ಮ ಸಂದೇಹವನ್ನು ಪರಿಹರಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ ಶಾಲಾ ವಿದ್ಯಾರ್ಥಿನಿ ಕುಮಾರಿ ಕಲ್ಪಿತ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya
error: Content is protected !!