26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಒತ್ತಾಯಿಸಿದ್ದಾರೆ.

ತಪ್ಪು ಯಾರು ಮಾಡಿದ್ದರು ಶಿಕ್ಷೆ ಅನುಭವಿಸಲೇ ಬೇಕು. ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಇಂದಿನ ಹೈಕೋರ್ಟ್‌ ತೀರ್ಪಿನಿಂದ ಬಯಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಅಕ್ರಮ ಎಸಗಿರುವುದಕ್ಕೆ ಹೈಕೋಟ್‌ ನೀಡಿರುವ ಈ ತೀರ್ಪಿಗಿಂತ ದೊಡ್ಡ ಸಾಕ್ಷ್ಯ ಬೇರೆ ಬೇಕಿಲ್ಲ. ಹೀಗಾಗಿ, ಸಿಎಂ ಸ್ಥಾನದಲ್ಲಿ ಮುಂದವರಿಯುವುದಕ್ಕೆ ಸಿದ್ದರಾಮಯ್ಯನವರಿಗೆ ಇನ್ನು ಯಾವುದೇ ನೈತಿಕತೆಯಿಲ್ಲ.

ಕರ್ನಾಟಕದ ಮುಖ್ಯಮಂತ್ರಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಹಾಗೂ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Related posts

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!