29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಐಟಿಐಗೆ ಶೇ. 100 ಫಲಿತಾಂಶ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಗೆ ಆಗಸ್ಟ್ 2024ರಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದೊರೆತಿದೆ.

ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಟರ್ನರ್, ಮೆಕ್ಯಾನಿಕ್ ಮೋಟಾರ್ ವಾಹನ, ರೆಫ್ರಿಜರೇಟರ್ ಎಸಿ ಟೆಕ್ನಿಷಿಯನ್ ವೃತ್ತಿಗಳಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದಲ್ಲಿ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿ ಶೇಕಡ 100 ಫಲಿತಾಂಶ ದೊರೆತಿದೆ. ಒಂದು ವರ್ಷದ ವೃತ್ತಿ ಘಟಕಗಳಾದ ಮೆಕ್ಯಾನಿಕ್ ಡೀಸೆಲ್ ವೃತ್ತಿಯಲ್ಲಿ ಶೇಕಡ 98, ವೆಲ್ಡರ್ ವೃತ್ತಿಯಲ್ಲಿ ಶೇಕಡ 92 ಫಲಿತಾಂಶ ಬಂದಿದ್ದು ಒಟ್ಟು 314 ಅಭ್ಯರ್ಥಿಗಳಲ್ಲಿ 310 ಮಂದಿ ತೇರ್ಗಡೆ ಹೊಂದಿರುತ್ತಾರೆ.

ಈಗಾಗಲೇ ಕ್ಯಾಂಪಸ್ ನ ಮೂಲಕ ವಿವಿಧ ಬಹುರಾಷ್ಟ್ರೀಯ ಕಂಪನಿಗಳಿಗೆ ಆಯ್ಕೆಗೊಂಡಿರುವ ಈ ಎಲ್ಲಾ ವಿದ್ಯಾರ್ಥಿಗಳು ಕಂಪನಿಗಳಲ್ಲಿ ತಮ್ಮ ವೃತ್ತಿ ಬದುಕನ್ನು ಪ್ರಾರಂಭಿಸಿರುತ್ತಾರೆ. ಸಂಸ್ಥೆಯ ಉತ್ತಮ ಫಲಿತಾಂಶಕ್ಕಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್. ಇವರು ಸಿಬ್ಬಂದಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ ಎಂದು ಸಂಸ್ಥೆಯ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya
error: Content is protected !!