ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ (ಸೆ.24) ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ, ರಾಜ್ಯಪಾಲರ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿದೆ. ಇದರೊಂದಿಗೆ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ಅತಂತ್ರವಾದಂತಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾ|ಎಂ.ನಾಗಪ್ರಸನ್ನ ಅವರಿರುವ ಏಕಸದಸ್ಯ ನ್ಯಾಯಪೀಠವು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದೆ.

Related posts

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!