23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಕಾಶಿಪಟ್ಣ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2023-24ನೇ ಸಾಲಿನ ಪ್ರತಿಷ್ಠಿತ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ತಾತ್ಕಾಲಿಕ ಪಟ್ಟಿಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತು ಆಯ್ಕೆಯಾಗಿದೆ.

ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಅ.೨ ಗಾಂಧಿ ಜಯಂತಿಯಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ನಗದು ಬಹುಮಾನವನ್ನು ಒಳಗೊಂಡಿರುತ್ತದೆ.


ಕಾಶಿಪಟ್ಣ ಗ್ರಾಮ ಪಂಚಾಯತು ತಾಲೂಕಿನ ಉತ್ತಮ ಗ್ರಾಮ ಪಂಚಾಯತುಗಳಲ್ಲಿ ಒಂದಾಗಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪಂಚಾಯತು ವ್ಯಾಪ್ತಿಯ ತ್ಯಾಜ್ಯ ನಿರ್ಮೂಲನೆಗೆ ಆದ್ಯತೆ ನೀಡಿ, ಪಂಚಾಯತು ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ.


ಗ್ರಾಮದಲ್ಲಿ ರಸ್ತೆ ಸೇರಿದಂತೆ ಅನೇಕ ಕಾಮಗಾರಿ ನಿರ್ವಹಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಪಂಚಾಯತು ವತಿಯಿಂದ ನಡೆದ ಅಭಿವೃದ್ಧಿ ಕಾರ್ಯಗಳು, ಚುನಾಯಿತ ಆಡಳಿತ ಮಂಡಳಿಯ ಉತ್ತಮ ಆಡಳಿತ, ಪಿಡಿಒ ಮತ್ತು ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಮೊದಲಾದ ಅಂಶಗಳನ್ನು ಪರಿಗಣಿಸಿ ಈ ಕಾಶಿಪಟ್ನ ಗ್ರಾಮ ಪಂಚಾಯತು ಅರ್ಹವಾಗಿಯೇ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ- ಸಾವಿರಾರು ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ,ಭಜನಾ ಕಮ್ಮಟದ ಉದ್ಘಾಟನೆ- ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya
error: Content is protected !!