March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮುಡ ಪ್ರಕರಣ ಇದು ಬಿಜೆಪಿಯ‌ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟವಾಗಿದೆ. ಬಿಜೆಪಿ, ಜೆಡಿಎಸ್‌ ಪಕ್ಷದ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಗಳ ಪರವಾಗಿ ಭದ್ರವಾಗಿ ನಿಂತಿದ್ದಾರೆ. ಬಡವರ ಪರವಾಗಿರುವ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವವರು ಎನ್ನುವ ಕಾರಣಕ್ಕಾಗಿ ಮುಖ್ಯಮಂತ್ರಿಗಳ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳು ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya
error: Content is protected !!