ಬೆಳ್ತಂಗಡಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆಯಿತು.

ಹಿರಿಯರಾದ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ರವರು ದೀನ್ ದಯಾಳ್ ಜಿಯವರ ಜೀವನ ಚರಿತ್ರೆಯನ್ನು ತಿಳಿಸಿದರು. ಅವರ ಆದರ್ಶಗಳನ್ನು ಸಂಘಟನೆಗೆ ಹಾಕಿದ ಬುನಾದಿಯನ್ನು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ಕಾರ್ಯದರ್ಶಿ ಗಿರೀಶ್ ಡೊಂಗ್ರೆ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ಪ್ರಭು, ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ನಗರ ಉಪಸ್ಥಿತರಿದ್ದರು.