22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

ಉಜಿರೆ, ಸೆ. 23: ಸಂಸದೀಯ ವ್ಯವಹಾರಗಳ ಇಲಾಖೆ ಕರ್ನಾಟಕ ಸರಕಾರ, ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಪಪೂ. ಕಾಲೇಜಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿಗಳಾದ ಕಾರ್ತಿಕ್ ಡಿ. ಸಿ. ಹಾಗೂ ಹಸೀನಾ ಕೆ. ಅವರು ‘ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ’ ಪಡೆದುಕೊಂಡಿದ್ದಾರೆ.


ಮಂಗಳೂರಿನ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜಿನಲ್ಲಿ ಸೆ. 20 ರoದು ಸ್ಪರ್ಧೆ ನಡೆಯಿತು. ದ ಕ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸಿ ಜಯಣ್ಣ ಪ್ರಶಸ್ತಿ ವಿತರಿಸಿದರು.


ಬಹುಮಾನ ವಿಜೇತರನ್ನು ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ. ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ದಿವ್ಯಾ ಕುಮಾರಿ ತರಬೇತಿ ನೀಡಿದ್ದರು. 

Related posts

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya
error: Content is protected !!