20.6 C
ಪುತ್ತೂರು, ಬೆಳ್ತಂಗಡಿ
November 26, 2024
Uncategorized

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ ೫ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ವಿದುಷಿ ಅನುಸೂಯ ಪಾಠಕ್, ಉಜಿರೆ ಹಾಗೂ ಶ್ರೀ ಉಪ್ಪುಂದ ರಾಜೇಶ್ ಪಡಿಯಾರ್, ಮೈಸೂರು ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು.

ಭಜನೆಯು ಭಕ್ತಿಯನ್ನು ಉದ್ದೀಪನಗೊಳಿಸಿ, ಬದುಕನ್ನು ಕಟ್ಟಿಕೊಡುತ್ತದೆ. ಬದುಕಿಗಿಂತ ಭಜನೆಯು ದೊಡ್ಡದಾಗಿದ್ದು, ಮಾಡುವ ಕೆಲಸವೇ ಭಜನೆಯಾಗಬೇಕು. ಇಂತಹ ಉಪನ್ಯಾಸಗಳು ಆತ್ಮವಲೋಕನ ಮಾಡಿಕೊಳ್ಳುವುದಕ್ಕೆ ದಾರಿಯಾಗಿದೆ ಎಂದು ಅಸೆಮ್ಸ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಪವನ್ ಕಿರಣ್‌ಕೆರೆ ನುಡಿದರು.

ಧರ್ಮಸ್ಥಳದ ‘ಮಹೋತ್ಸವ ಸಭಾಭವನ’ದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿದ್ದ 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಇಂದು(ಸೆ.26) ‘ಭಜನೆ ಮತ್ತು ಬದುಕು’ ಕುರಿತು ಉಪನ್ಯಾಸ ನೀಡಿದರು.

ಭಜನೆಯಿಂದ ಮನಸ್ಸು ಶುದ್ದವಾಗುತ್ತದೆ, ಭಜನೆ ಮಾಡುವಾಗ ದೇವರ ಮೇಲೆ ನಂಬಿಕೆಯಿರಬೇಕು. ಸಾಮಾನ್ಯನನ್ನು ಅಸಾಮಾನ್ಯನನ್ನಾಗಿ ಮಾಡುವ ಶಕ್ತಿ ಭಜನೆಗಿದ್ದು, ಅದು ಪಾಪವನ್ನು ತೊಳೆಯುವ ಕೆಲಸ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಮನುಷ್ಯನು ತನ್ನ ವಿವೇಕ ಹಾಗೂ ಚಿಂತನೆಯಿAದ ಬೇರೆ ಪ್ರಾಣಿಗಳಿಗಿಂತ ಬೇರೆಯಾಗಿದ್ದಾನೆ. ಆದರೆ, ನಾನು ಎಂಬ ಅರಿವಿಲ್ಲದಿರುವುದು ಇಂದು ಮನುಷ್ಯನ ಬಹುದೊಡ್ಡ ಸಮಸ್ಯೆಯಾಗಿದೆ. ಭಜನೆಯು ಅರಿವನ್ನು ಮೂಡಿಸುವ ಕೆಲಸ ಮಾಡುತ್ತದೆ ಎಂದರು.

ಎಸ್.ಡಿ.ಯಂ. ಕಲಾಕೇಂದ್ರ, ಉಜಿರೆ ಇವರಿಂದ ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ ನಡೆಯಿತು. ಯೋಗ ತರಬೇತಿಯನ್ನು ಡಾ. ಐ. ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಶ್ರೀಮತಿ ಸೌಮ್ಯ ಧರ್ಮಸ್ಥಳ ಇವರು ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿಕೊಟ್ಟರು. ಭಜನಾ ತರಬೇತಿ ಕಮ್ಮಟದ ಶಿಬಿರಾರ್ಥಿಗಳಿಂದ ೨ನೇ ದಿನದ ನಗರ ಸಂಕೀರ್ತನೆ ಕಾರ್ಯಕ್ರಮ ನಡೆಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸರಾವ್, ರತ್ನವರ್ಮ ಜೈನ್‌ರವರು ದಿನದ ಕಾರ್ಯಕ್ರಮವನ್ನು ಸಂಘಟಿಸಿದರು, ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.

ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯನ್, ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಸದಸ್ಯರಾದ ಪದ್ಮರಾಜ್ ಜೈನ್, ಮಹಾವೀರ ಅಜ್ರಿ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಸ್, ನಾಗೇಶ್ ಹಾಗೂ ಶ್ರೀಮತಿ ಚೈತ್ರ ನಡೆಸಿಕೊಟ್ಟರು. ಸಮನ್ವಯಾಧಿಕಾರಿಗಳಾಗಿ ರಾಘವೇಂದ್ರ, ಸಂತೋಷ್ ಪಿ. ಕರ್ತವ್ಯ ನಿರ್ವಹಿಸಿದರು.

ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯ  ಪದ್ಮರಾಜ್ ಜೈನ್ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya
error: Content is protected !!