April 2, 2025
Uncategorized

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ನಿರ್ದೇಶನದಂತೆ ಅ.4 ಶುಕ್ರವಾರ ಮತ್ತು ಅ.5 ಶನಿವಾರ ಬೆಳಿಗ್ಗೆ 9.೦೦ರಿಂದ ಸಂಜೆ 5.೦೦ರವರೆಗೆ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ.

ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞರಾದ ಡಾ| ವಸೀಮ್ ಇವರಿಂದ ಎಲ್ಲಾ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು.

ಈ ಶಿಬಿರದಲ್ಲಿ ಭಾರತ ಸರಕಾರದ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya
error: Content is protected !!