September 6, 2026
Uncategorized

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ನಿರ್ದೇಶನದಂತೆ ಅ.4 ಶುಕ್ರವಾರ ಮತ್ತು ಅ.5 ಶನಿವಾರ ಬೆಳಿಗ್ಗೆ 9.೦೦ರಿಂದ ಸಂಜೆ 5.೦೦ರವರೆಗೆ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ.

ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞರಾದ ಡಾ| ವಸೀಮ್ ಇವರಿಂದ ಎಲ್ಲಾ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು.

ಈ ಶಿಬಿರದಲ್ಲಿ ಭಾರತ ಸರಕಾರದ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!