23.9 C
ಪುತ್ತೂರು, ಬೆಳ್ತಂಗಡಿ
May 17, 2025
ಆರೋಗ್ಯತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪೆಂಡಿಸೈಟಿಸ್ ಸಮಸ್ಯೆ ಇರುವ 9 ವರ್ಷ ಪ್ರಾಯದ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರಿತ್ ಆರ್ ಶೆಟ್ಟಿ ಇವರ ತಂಡ ಶಸ್ತ್ರಚಿಕಿತ್ಸೆ ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಮಗು ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿರುತ್ತದೆ.


ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ ಅತೀ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳು ಕೂಡ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ನಗರದ ಹೈಟೆಕ್ ಆಸ್ಪತ್ರೆಗಳಲ್ಲಿ ದುಬಾರಿಯಾಗಿರುವ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya
error: Content is protected !!