25.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

ಉಜಿರೆ: ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಮನೋವಿಜ್ಞಾನದ ವಿದ್ಯಾರ್ಥಿಗಳಾಗಿ ಎಲ್ಲರ ಸರ್ವತೋಮುಖ ಬೆಳವಣಿಗೆ ಹಾಗೂ ಕಲ್ಯಾಣಕ್ಕಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕಿ ಕೃಷ್ಣಗೋಪಕುಮಾರ್ ಹೇಳಿದರು.


ಅವರು ಸೆ.24 ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಮನೋವಿಜ್ಞಾನ ಸಂಶೋಧನಾ ಕೇಂದ್ರ ಆಯೋಜಿಸಿದ “ಪೀಸ್” ವಿದ್ಯಾರ್ಥಿಸಂಘ ಉದ್ಘಾಟಿಸಿ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಸಂಘದ ಮೂಲಕ ಶಾಂತಿ ಕಾಪಾಡುವ ಕಾರ್ಯಗಳು ನಿರಂತರ ನಡೆಯಲಿ ಎಂದು ಆಶಿಸಿದರು.


ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್, ಕಾರ್ಯಕ್ರಮದ ಸಂಯೋಜಕಿ ಅಶ್ವಿನಿ ಶೆಟ್ಟಿ, ಡಾ. ಮಹೇಶ್‌ಬಾಬು, ಅಶ್ವಿನಿ ಎಚ್. ಸಿಂಧು ವಿ., ಸಂಘದ ಅಧ್ಯಕ್ಷರಾದ ಅಲಿಷ ಪಿ. ಜಾಯ್ ಉಪಸ್ಥಿತರಿದ್ದರು.


ಕಾರ್ಯದರ್ಶಿ ಕುಮಾರಿ ಚೈತನ್ಯ ಸ್ವಾಗತಿಸಿದರು. ಕುಮಾರಿ ಕೀರ್ತನಾ ಧನ್ಯವಾದವಿತ್ತರು. ಕುಮಾರಿ ಸ್ಟಿನ್ಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!