September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

ಉಜಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ. 27- 28 ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಧ.ಮಂ. ಪ. ಪೂ.ಕಾಲೇಜು ಪ್ರಾಂಶುಪಾಲರು ಪ್ರಮೋದ್ ಕುಮಾರ್ ಬಿ., ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಪೊಲೀಸ್ ಠಾಣೆ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಉಪನಿರೀಕ್ಷ ಮುರಳೀಧರ ನಾಯ್ಕ್ , ಶ್ರೀಮತಿ ಸೋನಿಯಾ ಯಶೋವರ್ಮ, ನಿನಾದ, ನೀರ ಚಿಲುಮೆ, ಭಾಗವಹಿಸಲಿದ್ದಾರೆ.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya
error: Content is protected !!