23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಘವೇಂದ್ರ ಆಚಾರ್ಯ, ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರು ಹಾಗೂ ಶ್ರೀಮತಿ ವಿದುಷಿ ಅನುಸೂಯ ಪಾಠಕ್, ಉಜಿರೆ ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜ್ಯನೀಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು.


ಉಪನ್ಯಾಸ ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಸಮಾಜಕ್ಕೆ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. 84 ಲಕ್ಷ ಜೀವರಾಶಿಗಳಲ್ಲಿ ಮಾನವಜನ್ಮ ದೊಡ್ಡದು. ಏಕೆಂದರೆ ಇತರ ಎಲ್ಲಾ ಪ್ರಾಣಿಗಳಿಗಿಂತ ಮನುಷ್ಯನಿಗೆ ವಿವೇಚನಾ ಶಕ್ತಿ ಅಂದರೆ ಯಾವುದು ಸರಿ, ಯಾವುದು ತಪ್ಪು ಎಂದು ನಿರ್ಧರಿಸುವ ಶಕ್ತಿ ಇದೆ. ಆದುದರಿಂದ ಎಲ್ಲರೂ ತಮ್ಮ ಆತ್ಮಸಾಕ್ಷಿಗೆ ಸರಿಯಾಗಿ ಕೆಲಸ ಮಾಡಿದಾಗ ಎಲ್ಲವೂ ಪರಿಶುದ್ಧವಾಗಿ ಮಾಡಿದ ಕೆಲಸ ಕೂಡಾ ಉತ್ತಮ ಪರಿಣಾಮವನ್ನು ಬೀರುತ್ತದೆ. ಭಗವಂತನ ಭಜನೆಯಿಂದ ನಮ್ಮ ಆತ್ಮ ಪರಿಶುದ್ಧವಾಗಿ, ನಾವು ಮಾಡುವ ಎಲ್ಲಾ ಕೆಲಸಗಳು ಕೂಡಾ ಪರಿಶುದ್ಧವಾಗಿರುತ್ತವೆ. ಇಂತಹ ಕಾರ್ಯಗಳಿಂದ ನಮಗೂ ಆತ್ಮತೃಪ್ತಿ ಸಿಗುತ್ತದೆ ಹಾಗೂ ಸಮಾಜಕ್ಕೂ ಒಳಿತಾಗುತ್ತದೆ. ಭಜನಾ ತರಬೇತಿ ಕಮ್ಮಟದಲ್ಲಿ ನೀಡಿದ ಎಲ್ಲಾ ಮಾಹಿತಿ ಮಾರ್ಗದರ್ಶನವನ್ನು ಮುಂದೆ ನೀವು ನಿತ್ಯವೂ ಜೀವನದಲ್ಲಿ ಅನುಷ್ಠಾನಗೊಳಿಸಿ, ಇತರರನ್ನೂ ಪ್ರೇರೇಪಿಸಿದಲ್ಲಿ ನಿಮಗೆ ಆತ್ಮತೃಪ್ತಿಯೂ ಸಿಗುತ್ತದೆ. ಅಲ್ಲದೆ ರಾಮರಾಜ್ಯದ ಕನಸು ನನಸಾಗುತ್ತದೆ. ಈ ದಿಸೆಯಲ್ಲಿ ನೀವೆಲ್ಲರೂ ಸಿದ್ಧರಾಗಿ, ಬದ್ಧರಾಗಿ ಸಮಾಜ ಕಲ್ಯಾಣ ಕಾರ್ಯಗಳನ್ನು ಮಾಡಬಹುದು. ಇದರಿಂದಾಗಿ ಮಾನಸಿಕ ನೆಮ್ಮದಿ ಹಾಗೂ ಶಾಂತಿ ಸಿಗುವುದಲ್ಲದೆ ಸಮಾಜ ಸೇವೆ ಮಾಡಿದ ಸಂತೃಪ್ತಿಯೂ ನಿಮಗೆ ಸಿಗುತ್ತದೆ ಎಂದು ಹೇಳಿದರು.


ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಶ್ರೀ ಹೆಗ್ಗಡೆಯವರು ಬಹುಮುಖಿ ಸಮಾಜ ಸೇವಾಕಾರ್ಯಗಳ ಮೂಲಕ ಮಾಡುತ್ತಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ನೀಡಿದರು.
ಸಂಜೆ ಭಜಣಾ ತಂಡದಿಂದ ನಗರ ಭಜನೆ ನಡೆಯಿತು.
ರಂಗಶಿವ ಕಲಾಬಳಗ, ಧರ್ಮಸ್ಥಳ ಇವರಿಂದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ನಿರ್ದೇಶನದಲ್ಲಿ ಮೂಡಿಬಂದದ “ಕೇಳೆಸಖಿ ಚಂದ್ರಮುಖಿ’ ನಾಟಕ ಪ್ರದರ್ಶನ ನಡೆಯಿತು. ಯೋಗ ತರಬೇತಿಯನ್ನು ಡಾ. ಐ. ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ   ಶ್ರೀನಿವಾಸರಾವ್, ರತ್ನವರ್ಮ ಜೈನ್‌ರವರು ದಿನದ ಕಾರ್ಯಕ್ರಮವನ್ನು ಸಂಘಟಿಸಿದರು, ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.


ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಸದಸ್ಯ ಪದ್ಮರಾಜ್ ಜೈನ್ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಶ್, ನಾಗೇಶ್ ಹಾಗೂ ಶ್ರೀಮತಿ ಚೈತ್ರ ನಡೆಸಿಕೊಟ್ಟರು. ಶಿಬಿರಾರ್ಥಿಗಳಾಗಿ ರಾಘವೇಂದ್ರ, ಸಂತೋಷ್ ಪಿ. ಕರ್ತವ್ಯ ನಿರ್ವಹಿಸಿದರು. 

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya
error: Content is protected !!