24.4 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

ಗುರುವಾಯನಕೆರೆ: ವಿದ್ವತ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಮಂಗಳೂರು, ಮತ್ತು ವಿದ್ವತ್ ಪದವಿ ಪೂರ್ವ ಕಾಲೇಜು ಶಕ್ತಿನಗರ ಗುರುವಾಯನಕೆರೆಯ ಸಹಯೋಗದೊಂದಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ ಸೆ.26 ರಂದು ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ವತ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ವಹಿಸಿ ಉದ್ಘಾಟನಾ ಭಾಷಣದೊಂದಿಗೆ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು.


ಅಧ್ಯಕ್ಷತೆಯನ್ನು ವೆಂಕಟೇಶ ಸುಬ್ರಾಯ ಪಟಗಾರ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ ದ.ಕ ಜಿ.ಪಂ ಮಂಗಳೂರು ವಹಿಸಿ ಬೆಳ್ತಂಗಡಿ ಹಾಗೂ ಮೂಡುಬಿದ್ರಿಯ ವಲಯದ 113 ಪ್ರೌಢಶಾಲಾ ಮುಖ್ಯಶಿಕ್ಷಕರುಗಳಿಗೆ ಶೈಕ್ಷಣಿಕ ಸಾಲಿನ ಸವಾಲುಗಳ ಕುರಿತು ಹಾಗೂ ಉತ್ತಮ ಫಲಿತಾಂಶಗಳನ್ನು ನೀಡುವ ಕುರಿತು ತಿಳಿಸಿದರು.

ವೇದಿಕೆಯಲ್ಲಿ ಶ್ರೀಮತಿ ರಾಜಲಕ್ಷಿ ಉಪನಿರ್ದೇಶಕರು (ಅಭಿವ್ರದ್ಧಿ) ಡಯಾಟ್ ಇಲಾಖೆ ದ.ಕ.ಜಿ ಪಂಚಾಯತ್ ಮಂಗಳೂರು, ಬೆಳ್ತಂಗಡಿ ಶಿಕ್ಷಣಾಧಿಕಾರಿಗಳು ಶ್ರೀಮತಿ ತಾರಕೇಸರಿ , ಮೂಡುಬಿದ್ರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿರೂಪಾಕ್ಷಪ್ಪ ಹೆಚ್. ಎಸ್, ಜಿಲ್ಲಾ ಶಿಕ್ಷಣಾಧಿಕಾರಿಗಳು ಲಕ್ಷೀನಾರಾಯಣ , ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷರು ವೆಂಕಟೇಶ ತುಳುಪಳೆ , ಕಾಲೇಜಿನ ಕೋಶಾಧಿಕಾರಿ ಎಂ.ಕೆ ಕಾಶಿನಾಥ್ ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರಾಧಾಕೃಷ್ಣ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ನೆರವೇರಿಸಿದರು. ಕಾರ್ಯಕ್ರಮದ ಪೂರ್ವಭಾವಿಯಾಗಿ 45 ನಿಮಿಷಗಳ ಉನ್ನತ ಶಿಕ್ಷಣಪಥ ಕಾರ್ಯಕ್ರಮವನ್ನು ವಿದ್ವತ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ ನಡೆಸಿಕೊಟ್ಟರು. ಕಾರ್ಯಕ್ರಮ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ ಹಾಗೂ ಆಡಳಿತ ಅಧಿಕಾರಿ ಚಂದ್ರಶೇಖರ್ ಗೌಡ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya
error: Content is protected !!