ಹೊಸಂಗಡಿ: ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ , ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ, ಹೊಸಂಗಡಿ ಗ್ರಾಮ ( ಸಂಯೋಜಕರು, ಬ್ಯಾಂಕ್ ಆಫ್ ಬರೋಡ ) ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರ ಸಹಭಾಗಿತ್ವದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2024-25ರ ಅಂಗವಾಗಿ, ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಸೆ. 25 ರಂದು ಫ್ರೆಂಡ್ಸ್ ಕ್ಲಬ್ ಸಭಾಭವನ, ಹೊಸಂಗಡಿಯಲ್ಲಿ ನಡೆಯಿತು.
ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ.ಕೇದಾರನಾಥ ಮತ್ತು ತೋಟಗಾರಿಕಾ ವಿಜ್ಞಾನಿ ಡಾ. ರಶ್ಮಿ ಇವರು ರೈತರಿಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಗ್ರಾಮದ ಸಮಿತಿ, ಹೊಸಂಗಡಿ ಗ್ರಾಮ ಇದರ ಅಧ್ಯಕ್ಷರು ಮತ್ತು ಕಾರ್ಯಕ್ರಮ ಸಂಯೋಜಕರಾದ ಹರಿಪ್ರಸಾದ್. ಪಿ. ವಹಿ ಸಿ, ಪ್ರಸ್ತಾವನೆಯೊಂದಿಗೆ ಸ್ವಾಗತ ಮತ್ತು ಧನ್ಯವಾದವಿತ್ತರು.
ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆಯ ಮುಂಚೂಣಿ ಪ್ರಾತ್ಯಕ್ಷಿಕೆ 2024 – 25 ಸಾಲಿನಲ್ಲಿ ಸುಮಾರು 10 ರೈತರನ್ನು ಆಯ್ಕೆ ಮಾಡಿ ಅವರಿಗೆ ಅಡಿಕೆ ಎಲೆ ಚುಕ್ಕಿ ರೋಗದ ನಿರ್ವಹಣೆಗಾಗಿ ಪರಿಕರಗಳನ್ನು ನೀಡಲಾಯಿತು.