April 2, 2025
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya
error: Content is protected !!