ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಇಂದ್ರಪ್ರಸ್ತ ಸಭಾಂಗಣ ಉಜಿರೆ ಇಲ್ಲಿ ಸೆ. 27 ರಂದು ನಡೆಯಿತು.
ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾI ಎಸ್ ಸತೀಶ್ಚಂದ್ರ ದೀಪ ಪ್ರಜ್ವಲಿಸುವುದರೊಂದಿಗೆ ಪಂದ್ಯಾಟವನ್ನು ಉದ್ಘಾಟಿಸಿದರು.
ಪಂದ್ಯಾಟದ ಮುಖ್ಯ ಅಭ್ಯಾಗತರು ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಮುರಳಿಧರ್ ನಾಯ್ಕ, ಇವರು ರಾಜ್ಯ ಮಟ್ಟದ ಕಬಡ್ಡಿ ಆಟಗಾರರು ಹಾಗೂ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳನ್ನು ಉದ್ದೇಶಿ ಮಾತಾನಾಡಿದರು.
ಪಂದ್ಯಾಟದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಪ್ರಮೋದ್ ಕುಮಾರ್ ವಹಿಸಿಕೊಂಡಿರುತ್ತಾರೆ.
ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಸುಧಾಕರ್ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕರು ಶಾರದಾ ಪದವಿ ಪೂರ್ವ ಕಾಲೇಜು, ಮಂಗಳೂರು ಹಾಗೂ ಜಿಲ್ಲೆಯ ಕ್ರೀಡಾ ಸಂಯೋಜಕರು ಶಶಿಧರ ಮಾಣಿ ಹಾಗೂ ಕ್ರೀಡಾ ಸಂಘದ ಕಾರ್ಯದರ್ಶಿಗಳು ರಮೇಶ್ ಎಚ್ ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಮಹಾವೀರ್ ಜೈನ್ ನಿರೂಪಿಸಿದರು. ಉಪ ಪ್ರಾಂಶುಪಾಲರು ರಾಜೇಶ್ ಕೆ ಸ್ವಾಗತಿಸಿ, ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ ಬಿ ಪೂಂಜ ವಂದಿಸಿದರು.