39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

ಉಜಿರೆ: ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡ 50ನೇ ವರ್ಷ ಸುವರ್ಣ ಕರ್ನಾಟಕವೆಂಬ ಪ್ರಯುಕ್ತ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಿ ರಾಜ್ಯಾದ್ಯಂತ ಸಂಚರಿಸಲಿರುವ  ಸುವರ್ಣ ಸಂಭ್ರಮ ರಥಯಾತ್ರೆ ದಕ್ಷಿಣ ಜಿಲ್ಲೆಯನ್ನು ಪ್ರವೇಶಿಸುವ ಸಂದರ್ಭದಲ್ಲಿ ಉಜಿರೆಯ ಮುಖ್ಯ ವೃತ್ತದಲ್ಲಿ  ಭವ್ಯ ಸ್ವಾಗತ ಕೋರಲಾಯಿತು.

ಬೆಳ್ತಂಗಡಿ ತಹಸೀಲ್ದಾರ್ ಪ್ರಥ್ವಿ ಸಾನಿಕಮ್ ರಥದಲ್ಲಿ ಅಳವಡಿಸಲಾದ ಭವ್ಯ  ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ  ಜಿಲ್ಲೆಗೆ ಬರಮಾಡಿಕೊಳ್ಳಲಾಯಿತು. ಚಿಕ್ಕಮಗಳೂರು ಜಿಲ್ಲೆಯಿಂದ  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ರಥಯಾತ್ರೆಯನ್ನು  ತಹಸೀಲ್ದಾರ್ ಅವರಿಗೆ ಹಸ್ತಾಂತರಿಸಲಾಯಿತು.   

ಈ ಸಂದರ್ಭದಲ್ಲಿ  ಬೆಳ್ತಂಗಡಿ ತಾಲೂಕು ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಭವಾನಿಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ,ದ ಕ. ಜಿಲ್ಲಾ ಕ ಸಾ ಪ ಅಧ್ಯಕ್ಷ ಡಾ| ಶ್ರೀನಾಥ್ ಎಂ ಪಿ. , ಬೆಳ್ತಂಗಡಿ  ತಾಲೂಕು ಕ.ಸಾ.ಪ.ಅಧ್ಯಕ್ಷ ಯದುಪತಿ ಗೌಡ  ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.         

                 

ಬೆಳ್ತಂಗಡಿ ತಾಲೂಕು ಕಂದಾಯ ನಿರೀಕ್ಷಕ ಪ್ರತೀಶ್ ಎಚ್ . ಆರ್ .,ವೇಣೂರು ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ,ಉಜಿರೆಯ ಕೈಗಾರಿಕೋದ್ಯಮ ಮತ್ತು ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ,ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಮತ್ತು ಉಜಿರೆಯ ನಾಗರಿಕರು ,ಸಾರ್ವಜನಿಕರು  ಉಪಸ್ಥಿತರಿದ್ದರು.  ರಥಯಾತ್ರೆಯಲ್ಲಿ ರಾಜ್ಯದ  ಕಲೆ,ಜಾನಪದ ಸಂಸ್ಕೃತಿ ಯನ್ನು ಬಿಂಬಿಸುವ  ಪ್ರತಿಕೃತಿಗಳನ್ನು ಅಳವಡಿಸಲಾಗಿತ್ತು.  ಕಲಾವಿದರು ತಮಟೆ ಬಾರಿಸುವ ಮೂಲಕ  ರಥಯಾತ್ರೆಯನ್ನು ಸ್ವಾಗತಿಸಿ ಬೀಳ್ಕೊಡಲಾಯಿತು. ರಥಯಾತ್ರೆ ಶನಿವಾರ ಬೆಳ್ತಂಗಡಿಯಲ್ಲಿ ವಾಸ್ತವ್ಯವಿದ್ದು  ಭಾನುವಾರ ಮಂಗಳೂರಿಗೆ ನಿರ್ಗಮಿಸಲಿದೆ.

Related posts

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಫಿಯನ್ ಶಿಪ್: ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!