ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ ಸೇವೆ ಮಾಡಿದ್ದಾರೆ. ಆಶಾಕಾರ್ಯಕರ್ತೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು. ಮುಂದೆ ನಡೆಯುವಂತಹ ಹೋರಾಟಗಳಲ್ಲಿ ನಾವೆಲ್ಲರೂ ಒಟ್ಟಾದರೆ ಮಾತ್ರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು.
ಈ ವೇಳೆ ಅ.26-27 ರಂದು ಮೈಸೂರಿನಲ್ಲಿ ನಡೆಯಲಿರುವ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು.
ವೇದಿಕೆಯಲ್ಲಿ ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮೀ, ನಗರ ಪಂಚಾಯತ್ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.
ಬೆಳ್ತಂಗಡಿ ತಾಲೂಕು ಯೂನಿಯನ್ ಅಧ್ಯಕ್ಷೆ ಎಂ.ಎನ್. ಗುಲಾಬಿ ಸ್ವಾಗತಿಸಿ, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ ನಿರೂಪಿಸಿ, ಕಾರ್ಯದರ್ಶಿ ಕೇಶವತಿ ಧನ್ಯವಾದವಿತ್ತರು.