ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟವು ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೆ.28ರಂದು ನಡೆಯಿತು.

ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳ ನಿರ್ದೇಶಕರು ಸೋನಿಯಾ ಯಶೋವರ್ಮ ವಿಜೇತರಿಗೆ ಪ್ರಶಸ್ತಿಯನ್ನು ನೀಡಿದರು ಹಾಗೂ ಭಾಗವಸಿದ್ದ ತಂಡದ ಆಟಗಾರರನ್ನು ಉದ್ದೇಶಿಸಿ ಮಾತನಾಡಿ ವಿಜೇತರಿಗೆ ರಾಜ್ಯಮಟ್ಟದಲ್ಲೂ ತಮ್ಮ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಶಸ್ತಿಯನ್ನು ಪಡೆದು ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಆಗಲಿ ಎಂದು ಶುಭ ಹಾರೈಸಿದರು.

ಪಂದ್ಯಾಟದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಮೋದ್ ಕುಮಾರ್ ವಹಿಸಿ, ವೈಯಕ್ತಿಕ ವಿಭಾಗದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಹುಮಾನವನ್ನು ನೀಡಿದರು.

ಕಾಲೇಜಿನ ಉಪ ಪ್ರಾಂಶುಪಾಲ ಡಾ| ರಾಜೇಶ್ ಕೆ., ಕಬಡ್ಡಿ ಪಂದ್ಯಾಟದ ಪರಿವೀಕ್ಷಕರಾಗಿ ಆಗಮಿಸಿದ ಬಜಪೆ ಸೈಂಟ್ ಜೋಸೆಫ್ ಪಿಯು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಅರುಣ್ ಕುಮಾರ್ ಡಿಸೋಜಾ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕಿ ಅಂಕಿತ ಗೌಡ, ಸಂಸ್ಥೆಯ ಕಬ್ಬಡಿ ತರಬೇತುದಾರ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ಮಹಾವೀರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ ಬಿ. ಪೂಂಜ ವಂದಿಸಿದರು.

ಫಲಿತಾಂಶ:
ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ: ಆಳ್ವಾಸ್ ಕಾಲೇಜು ಮೂಡಬಿದ್ರೆ
ದ್ವಿತೀಯ ಸ್ಥಾನ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು
ವೈಯಕ್ತಿಕ ವಿಭಾಗದಲ್ಲಿ: ಉತ್ತಮ ದಾಳಿಗಾರ್ತಿ: ಕು. ಬಿಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಉತ್ತಮ ಸವ್ಯಸಾಚಿ: ಪ್ರಾನ್ವಿಕ ಆಳ್ವಾಸ್ ಕಾಲೇಜು ಮೂಡಬಿದ್ರೆ ಹಾಗೂ ಉತ್ತಮ ಹಿಡಿತಗಾರ್ತಿ: ವಂಶಿಕ ಆಳ್ವಾಸ್ ಕಾಲೇಜು ಮೂಡಬಿದ್ರೆ ಇವರು ಪಡೆದುಕೊಂಡಿರುತ್ತಾರೆ.

Leave a Comment

error: Content is protected !!