23.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ.

ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಬರುತ್ತಿದ್ದಾಗ ಪಾದೆಗುಡ್ಡೆ ಬಳಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಸುರೇಶ್‌ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್‌ (2 ವ) ಎಂದು ಗುರುತಿಸಲಾಗಿದೆ. ಸುರೇಶ್‌ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಮಣೇಲು ಗಾಂಧಿನಗರ ನಿವಾಸಿ ಸೀತರಾಮ ಆಚಾರ್ಯ ರವರ ಕುಟುಂಬಿಕರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

Related posts

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya
error: Content is protected !!