September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು ಪರಿಣಾಮ ಗೋಡೆ ಬಿರುಕು ಬಿಟ್ಟು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೇಸಪ್ಪ ಅವರು ಸಂಜೆ ಸುಮಾರು 3.45 ರಿಂದ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ವೇಳೆ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದು ಮನೆಗೆ ಬಂದು ನೋಡಿದಾಗ ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆಯಲ್ಲದೇ ಗೋಡೆಯಿಂದ ಕಿತ್ತು ಬಂದಿದೆ. ಅಲ್ಲಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶೌಚಾಲಯದ ಗೋಡೆ ಸಂಪೂರ್ಣ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಮಕ್ಕಳನ್ನು ಕರೆ ತರಲು ನಾವು ಶಾಲೆಗೆ ಹೋಗಿದ್ದರಿಂದ ಮಕ್ಕಳಿಗೆ ಹಾಗೂ ನಮಗೆ ಏನು ತೊಂದರೆ ಅಗಿಲ್ಲ, ಸಿಡಿಲು ಬಡಿತದಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಈ ಬಗ್ಗೆ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

Related posts

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya
error: Content is protected !!