24.4 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ.

ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಬರುತ್ತಿದ್ದಾಗ ಪಾದೆಗುಡ್ಡೆ ಬಳಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಸುರೇಶ್‌ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್‌ (2 ವ) ಎಂದು ಗುರುತಿಸಲಾಗಿದೆ. ಸುರೇಶ್‌ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಮಣೇಲು ಗಾಂಧಿನಗರ ನಿವಾಸಿ ಸೀತರಾಮ ಆಚಾರ್ಯ ರವರ ಕುಟುಂಬಿಕರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

Related posts

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!