25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಆರ್ಥಿಕ ಸಂಕಷ್ಟದಲ್ಲಿದ್ದು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಗ್ರಾಮದ ಪುತ್ತಿಲ ನಿವಾಸಿ ನೀಲಯ್ಯ ಗೌಡರ ಪತ್ನಿ ಸುನಂದಾ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ರೂ.15,000/-ದ ಚೆಕ್ಕನ್ನು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಇವರ ಮೂಲಕ ಫಲಾನುಭವಿಯ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಮಂಗಳೂರು, ಸದಸ್ಯರಾದ ಗಣೇಶ್ ಗೌಡ ಕಲಾಯಿ, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ಬೆಳಾಲು, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಮತ್ತು ಧರ್ಣಪ್ಪ ಗೌಡ ಬಾನಡ್ಕ, ಜತೆ ಕಾರ್ಯದರ್ಶಿ ಶ್ರೀನಾಥ ನಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ, ಸವಣಾಲು, ತಾಲೂಕು ಸಂಘದ ನಿರ್ದೇಶಕರುಗಳು, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಯುವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸ್ಪಂದನಾ ಸೇವಾ ಸಂಘದ ಸದಸ್ಯರುಗಳು ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!