September 6, 2026
Uncategorized

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ಸಂಜೆ ನಡೆದ ಬಗ್ಗೆ ವರದಿಯಾಗಿದೆ.

ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ 10ವರ್ಷ ಪ್ರಾಯದ ಪುತ್ರ, ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್ ಮೃತಪಟ್ಟವರು.

ಮನೆಯ ಮಹಿಳೆಯೊಬ್ಬರು ಅಂಗಳದಲ್ಲೇ ಕಾರು ಹಿಂದಕ್ಕೆ ತೆಗೆಯುವ ಸಂದರ್ಭ ಆಕಸ್ಮಿಕವಾಗಿ ಮುಂದಕ್ಕೆ ಚಲಾಯಿಸಿ ಡಿಕ್ಕಿ ಹೊಡೆದಿದೆ. ಶಾಲೆ ಬಿಟ್ಟು ಆಗಷ್ಟೇ ಮನೆಗೆ ಬಂದಿದ್ದ ಬಾಲಕ ನವಾಫ್ ಕಾರಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ. ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್ ಕಾರಿನ ಹಿಂಬದಿ ನಿಂತಿದ್ದದ್ದು ಅರಿವಿಗೆ ಬಾರದೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿರಿಸಲಾಗಿದೆ. ಘಟನೆ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಪದಗ್ರಹಣ: ನೂತನ ಸಮಿತಿ ಅಧಿಕಾರ ಸ್ವೀಕಾರ

Suddi Udaya
error: Content is protected !!