September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇದರ ಆಶ್ರಯದಲ್ಲಿ 8ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ ಸೆ.29 ರಂದು ಹಳ್ಳಿಂಗೇರಿಯ ಶ್ರೀಅಯ್ಯಪ್ಪ ಸ್ವಾಮಿ ಮಂದಿರದ ವಠಾರದಲ್ಲಿ ನಡೆಯಿತು.


ಹಳ್ಳಿಂಗೇರಿ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಕೆ.ವಿ.ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಸಿ ಡಿ ಸಿ ಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ವಹಿಸಿದ್ದರು. ಪುತ್ತೂರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಪುತ್ತೂರು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕೊಕ್ಕಡ ವೈದ್ಯನಾಥೇಶ್ಬರ ವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ವೇ|ಮೂ| ಬಾಲಕೃಷ್ಣ ಕೆದಿಲಾಯ, ಕೊಕ್ಕಡ ಶ್ರೀರಾಮ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಹಳ್ಳಿಂಗೇರಿ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ, ಉದ್ಯಮಿ ಗಣೇಶ್ ಗೌಡ ಕಲಾಯಿ, ಸಮಿತಿಯ ಅಧ್ಯಕ್ಷ ಕಿಶೋರ್ ಪೂಜಾರಿ ಪೊಯ್ಯೋಳೆ, ಕಾರ್ಯದರ್ಶಿ ಶರತ್ ಹಳ್ಳಿಂಗೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಿಕ್ಷಕ ದಾಮೋದರ ಅಜ್ಜಾವರ ಸ್ವಾಗತಿಸಿದರು. ಸಚಿನ್ ಬಜ ವಂದಿಸಿದರು. ಕೇಶವ ಹಳ್ಳಿಗೇರಿ ನಿರೂಪಿಸಿದರು.
ಸಾರ್ವಜನಿಕರಿಗೂ ಹಾಗೂ ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಯನ್ನು ನಡೆಸಲಾಯಿತು. ಅಂತರ್ ರಾಜ್ಯ ನಿರೂಪಕ ಸುರೇಶ್ ಪಡಿಪಂಡ ಹಾಗೂ ದೀಪಕ್ ನೆಲ್ಯಾಡಿ ಪಂದ್ಯಾಟವನ್ನು ನಡೆಸಿಕೊಟ್ಟರು. ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಯವರು ಸಹಕರಿಸಿದರು.

Related posts

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya
error: Content is protected !!