28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಉಜಿರೆ : ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಇದರ ಆಶ್ರಯದಲ್ಲಿ ನಡೆಯುವ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾವಳಿ – 2024 ಇದರ ಉದ್ಘಾಟನಾ ಸಮಾರಂಭವು ಅ. 1ರಂದು ಉಜಿರೆ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣ ನಡೆಯಿತು.

ಪ್ರೊ ಕಬಡ್ಡಿ ಆಟಗಾರ ರಥನ್ ಕೆ. ಎ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವು ಇದ್ದೆ ಇರುತ್ತದೆ. ಎರಡನ್ನು ಸ್ವೀಕರಿಸಿ ಮುನ್ನಡೆಯುವಂತಹ ಕೆಲಸವನ್ನು ಮಾಡಬೇಕು ಎಂದು ಕ್ರೀಡಾ ಪಟುಗಳಿಗೆ ಶುಭಹಾರೈಸಿದರು.

ಪ್ರಾಂಶುಪಾಲರಾದ ಸಂತೋಷ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಸ್ ಡಿ ಎಂ ಸಂಸ್ಥೆ ಶಿಕ್ಷಣದ ಜೊತೆ ಜೊತೆಗೆ ಕ್ರೀಡೆಯನ್ನು ಕೂಡ ಆಯೋಜಿಸಿಕೊಂಡು ಬಂದಿದೆ. ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸೋಲು ಗೆಲುವು ಎರಡನ್ನು ಸ್ವೀಕರಿಸಿ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ಉಜಿರೆ ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್, ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತರಬೇತುದಾರರಾದ ಕೃಷ್ಣಾನಂದಾ ರಾವ್, ದೈಹಿಕ ಶಿಕ್ಷಣ ಶಿಕ್ಷಕ ನಿತಿನ್ ಉಪಸ್ಥಿತರಿದ್ದರು.

ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಪತ್ ಕುಮಾರ್ ನಿರೂಪಿಸಿದರು. ಮೆಕಾನಿಕಲ್ ವಿಭಾಗದ ಶ್ರೇಯಾಂಕ್ ಜೈನ್ ಸ್ವಾಗತಿಸಿ, ಸಿವಿಲ್ ವಿಭಾಗದ ಪ್ರವೀಣ್ ವಂದಿಸಿದರು.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya
error: Content is protected !!