25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

ಉಜಿರೆ – ಅ-01 ಇಲ್ಲಿನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ( ಡಯಟ್)ಯ ಹಿರಿಯ ಉಪನ್ಯಾಸಕ ಹಾಗೂ ಬೆಳ್ತಂಗಡಿ ತಾಲೂಕು ನೋಡಲ್ ಅಧಿಕಾರಿಯಾದ ಶ್ರೀ ಶಶಿಧರ ಜಿ.ಎಸ್. ಮಾತನಾಡುತ್ತಾ ಅರಿವಿನ ಅನುಭವದ ನೆಲೆಯಲ್ಲಿ ಪ್ರಶಿಕ್ಷಣಾರ್ಥಿಗಳು ಶಿಕ್ಷಕ ವೃತ್ತಿಯನ್ನು ಗೌರವಿಸಿ, ಪ್ರೀತಿಸಿ ಬೋಧಿಸಬೇಕೆಂದು ತಿಳಿಸುವುದರೊಂದಿಗೆ ಗುರು ಶಿಷ್ಯರ ಪರಂಪರೆ ಅವಿಸ್ಮರಣೀಯ ಎಂದು ಹೇಳುತ್ತಾ ಜಗತ್ತಿನಲ್ಲಿ ಶ್ರೇಷ್ಠ ಸಂಪತ್ತು ಅದುವೇ ಮಾನವ ಸಂಪತ್ತು ಎಂದರು.

” ಮಗುವಿನ ಅತ್ಯುತ್ತಮವಾದ ಕೌಶಲ್ಯ ಬೆಳವಣಿಗೆಯಲ್ಲಿ ಗುರುವಿನ ಪಾತ್ರ ಮಹತ್ತರವಾದದ್ದು ಹಾಗಾಗಿ ಶಿಕ್ಷಕರು ಮಗುವಿಗೆ ಹೇಗೆ ಪ್ರಭಾವಿತರಾಗುವರು ಎಂಬುವುದಕ್ಕೆ ಕಲಾಂ ಅವರ ಜೀವನವೇ ಒಂದು ಉತ್ತಮ ಉದಾಹರಣೆ ಎಂದು ತಿಳಿಸಿದರು.”

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಡಿ.ಎಂ.ಇ. ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ
ಶ್ರೀ ಧನ್ಯಕುಮಾರ್ ವಿಷಯವಾರು ಸಂಘಗಳನ್ನು ಉದ್ಘಾಟಿಸಿ ಮಾತನಾಡುತ್ತಾ
ಮಗುವಿನ ಶೈಕ್ಷಣಿಕ ಮತ್ತು ಬೌದ್ಧಿಕ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಶಿಕ್ಷಕರ ಜ್ಞಾನ ಮತ್ತು ಕೌಶಲ ಮುಖ್ಯವಾಗಿರುತ್ತದೆ.
ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಲ್ಲದೆ ಬೇರೇನೂ ಅಲ್ಲ. ಶಿಕ್ಷಣವು ಮನುಷ್ಯನನ್ನು ರೂಪಿಸುವ ಪ್ರಕ್ರಿಯೆಯಾಗಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಅಗತ್ಯ ಎಂದು ಅಭಿಪ್ರಾಯಪಟ್ಟರು.

2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾದವರಿಗೆ ಪ್ರಾಂಶುಪಾಲರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ ಫಾತಿಮಾ( ದ್ವಿತೀಯ ಡಿ.ಎಡ್) ಉಪ ಕಾರ್ಯದರ್ಶಿಯಾಗಿ ಪ್ರಭಾವತಿ (ಪ್ರಥಮ ಡಿ.ಎಡ್) ಕ್ರೀಡಾ ಕಾರ್ಯದರ್ಶಿಯಾಗಿ ಚಿತ್ರಲೇಖ( ದ್ವಿತೀಯ ಡಿ.ಎಡ್) ಉಪ ಕಾರ್ಯದರ್ಶಿಯಾಗಿ ಶ್ರೀಕುಮಾರ್ (ಪ್ರಥಮ ಡಿ.ಎಡ್) ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಯಾಗಿ ಅನುಷಾ( ದ್ವಿತೀಯ ಡಿ.ಎಡ್) ಉಪ ಕಾರ್ಯದರ್ಶಿಯಾಗಿ ಜಯಶ್ರೀ(ಪ್ರಥಮ ಡಿ.ಎಡ್) ಶಿಸ್ತುಪಾಲನ ಕಾರ್ಯದರ್ಶಿಯಾಗಿ ತೇಜು( ದ್ವಿತೀಯ ಡಿ.ಎಡ್) ಉಪ ಕಾರ್ಯದರ್ಶಿಯಾಗಿ ಸತ್ಯನಾರಾಯಣ(ಪ್ರಥಮ ಡಿ.ಎಡ್).

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಮಂಜು ಆರ್, ಪ್ರಿಯದರ್ಶಿನಿ. ಸಿಬ್ಬಂದಿ ವರ್ಗದವರು ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲರಾದ ಸ್ವಾಮಿ ಕೆ. ಎ. ಪ್ರಾಸ್ತವಿಕ ನುಡಿಗಳನ್ನಾಡಿ ಮುಖ್ಯ ಅತಿಥಿಗಳನ್ನು ಸ್ವಾಗತಿಸಿದರು.
ಪ್ರಶಿಕ್ಷಣಾರ್ಥಿಗಳಾದ
ಅಂಬಿಕಾ,ಅಶ್ವಿತಾ ಮತ್ತು ಅನುಷ ಪ್ರಾರ್ಥಿಸಿ, ಶಹನಾಝ್ ವಂದಿಸಿ, ಮುಝೈನಾ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!