22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

ಗಂಡಿಬಾಗಿಲು : ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.02 ರಂದು ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಸಭೆಯ ಅಧ್ಯಕ್ಷಸ್ಥಾನವನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ರವರು ಮಾತನಾಡಿ, ಗಾಂಧೀಜಿಯವರು ಶಾಂತಿ-ಅಹಿಂಸೆಗಳ ಹರಿಕಾರ, ಸತ್ಯದ ಸರದಾರ. ನಮ್ಮ ರಾಷ್ಟ್ರಪಿತರ ಬದುಕು, ಬೋಧನೆ, ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.

ಸಿಯೋನ್ ಅಶ್ರಮದಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಹಿರಿಯರನ್ನು ಗೌರವಿಸಿ, ನೆಮ್ಮದಿಯ ಬದುಕು ಕಲ್ಪಿಸಿಕೊಡುವುದರಿಂದ ಮಾನವ ಜನ್ಮ ಸಾರ್ಥಕವಾಗಿಸಬಹುದೆಂದರು ಹಾಗೂ ಸಿಯೋನ್ ಆಶ್ರಮದಲ್ಲಿ ಯಾವುದೇ ಜಾತಿ-ಮತ, ಬೇಧ-ಭಾವವಿಲ್ಲದೇ ಬೇರೆ ಬೇರೆ ಧರ್ಮದ ಮೂವರು ಹಿರಿಯ ನಾಗರಿಕರನ್ನು ಗುರುತಿಸಿ, ಪ್ರತಿ ವರ್ಷ ಸನ್ಮಾನಿಸಲಾಗುವುದೆಂದು ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಹಿರಿಯ ನಾಗರಿಕರಾದ ಮಾಲಾಡಿ ಗ್ರಾಮದ ಕೋಡಿಯೇಲು ಬಸವನಗುಡಿ ಎಂಬಲ್ಲಿ ವಾಸವಾಗಿರುವ ಪದ್ಮನಾಭ ಸಾಲಿಯಾನ್, ಮೇಲಂತಬೆಟ್ಟು ಗ್ರಾಮದ ಕಲ್ಕಣಿಬೈಲು ಎಂಬಲ್ಲಿ ವಾಸವಾಗಿರುವ ಫೆಲಿಸಿಟಾಸ್ ಮೊರಿಸ್, ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ವಾಸವಾಗಿರುವ ಹಸನಬ್ಬ ಇವರುಗಳನ್ನು ಪ್ರಮಾಣ ಪತ್ರ, ಫಲಪುಷ್ಪಗಳೊಂದಿಗೆ, ಪೇಟಾ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸನ್ಮಾನಿಸಲ್ಪಟ್ಟ ಹಿರಿಯ ನಾಗರಿಕರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು. ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಶಿವಾನಂದ ಸ್ವಾಮಿಯವರು ಹಾಗೂ ಆಶ್ರಮನಿವಾಸಿಗಳಾದ ರಾಮಚಂದ್ರ ಭಂಡಾರಿ ಮತ್ತು ಗೀತಾಕಾಮತ್ರವರು ಉಪಸ್ಥಿತರಿದ್ದರು.

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೆ.10 ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟದಲ್ಲಿ ಸಿಯೋನ್ ಆಶ್ರಮದ 6ಮಂದಿ ಫಲಾನುಭವಿಗಳು ಭಾಗವಹಿಸಿ ವಿಜೇತರಾಗಿದ್ದು, ಬಹುಮಾನ ನೀಡಿ ಸನ್ಮಾನಿಸಲಾಯಿತು ಹಾಗೂ ಸಿಯೋನ್ ಆಶ್ರಮದಲ್ಲಿ ಹಿರಿಯ ನಾಗರಿಕ ನಿವಾಸಿಗಳಿಗೆ ಒಳಾಂಗಣ ಆಟಗಳನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಿಯೋನ್ ಆಶ್ರಮದ ಆಡಳಿತಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ.ರವರು ಸ್ವಾಗತಿಸಿ, ಸಿಬ್ಬಂದಿಯವರಾದ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!