ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸಿದ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ,“ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ (ವಿ.ಕೆ. ವಿಟ್ಲ)ರವರಿಗೆ ನಾಗರಿಕ ಅಭಿನಂದನಾ ಸಮಿತಿಯಿಂದ ಕುವೆಟ್ಟು ಹಾಗೂ ಓಡಿಲ್ನಾಳ ಗ್ರಾಮದ 35 ಸಂಘ ಸಂಸ್ಥೆಗಳು ಒಟ್ಟು ಸೇರಿ ಅಭಿನಂದನಾ ಸಮಾರಂಭ ಅ.2ರಂದು ನಡೆಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬರೋಡ ತುಳುಕೂಟದ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ವಹಿಸಿದ್ದರು. ಅಂಕಣಕಾರರಾದ ಆದರ್ಶ್ ಗೋಖಲೆ ಅಭಿನಂದನಾ ಭಾಷಣವನ್ನು ಮಾಡಿದರು.
ವೇದಿಕೆಯಲ್ಲಿ ನಾಗರೀಕ ಅಭಿನಂದನಾ ಸಮಿತಿ ಅಧ್ಯಕ್ಷ ,ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಮಾಜಿ ಶಾಸಕರು, ನಾಗರಿಕ ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಕೆ. ಪ್ರಭಾಕರ ಬಂಗೇರ ಉಪಸ್ಥಿತರಿದ್ದರು.
ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಕಿನ್ನಿಗೋಳಿಯ ವರೆಗೆ ಯೋಧರರಾದ ಮಂಜುನಾಥ್ ರವರನ್ನು ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ. ವಿ.ಕೆ. ವಿಟ್ಲ ರವರನ್ನು ಗುರುವಾಯನಕೆರೆಯಲ್ಲಿ ಸ್ವಾಗತಿಸಿ . ಮದ್ದಡ್ಕ-ಕಿನ್ನಿಗೋಳಿಯಿಂದ ಭವ್ಯ ಮೆರವಣಿಗೆಯಲ್ಲಿ ಕಾಲ್ನಡಿಗೆಯ ಮೂಲಕ “ಸೈನಿಕ-ಶಿಕ್ಷಕ”ರನ್ನು ಸಭಾಂಗಣಕ್ಕೆ ಕರೆತರಲಾಯಿತು. ನಂತರ ವೈಯಕ್ತಿಕ ಹಾಗೂ ಸಂಘ-ಸಂಸ್ಥೆಗಳಿಂದ ಅಭಿನಂದನೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ನಾಗರೀಕ ಅಭಿನಂದನಾ ಸಮಿತಿ ಪ್ರಧಾನ ಸಂಚಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ವಿದ್ವತ್ ಕಾಲೇಜಿನ ಮುಖ್ಯಸ್ಥರಾದ ಸುಭಾಶ್ಚಂದ್ರ ಶೆಟ್ಟಿ, ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ, ಅರಮಲೆ ಬೆಟ್ಟ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುಕೇಶ್ ಕುಮಾರ್ ಕಡಂಬು, ಪ್ರವೀಣ್ ಕುಮಾರ್ ಅಜ್ರಿ, ಅಭಿನಂದನಾ ಸಮಿತಿ ಸಂಚಾಲಕ ಗಂಗಾಧರ ಕೆವುಡೇಲು, ಬಳ್ಳಮಂಜ ಕ್ಷೇತ್ರದ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಅಭಿನಂದನಾ ಸಮಿತಿ ಪ್ರಧಾನ ಕಾರ್ಯದರ್ಶಿ ಧರಣೇಂದ್ರ ಕೆ ಜೈನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು,ನಾಗರಿಕ ಅಭಿನಂದನಾ ಸಮಿತಿ ಸದಸ್ಯರು, ಊರವರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರೂಪಣೆ ನಿತಿನ್ ಗುರುವಾಯನಕೆರೆ ಮಾಡಿದರು.