23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ ಬಿಡುಗಡೆ ಮತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ದೇವದಾಸ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಧನಂಜಯ್ ಕುಮಾರ್, ಸೀನಿಯರ್ ಮಂಜುಶ್ರೀ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ರೋಟರಿ ಯಶವಂತ ಪಟವರ್ಧನ್, ರಾಜಕೇಸರಿ ಸ್ಥಾಪಕ ಅಧ್ಯಕ್ಷ ದೀಪಕ್ ಜಿ, ಲಯನ್ಸ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಮಹಾವೀರ ಅರಿಗ ಮತ್ತು ಸಿಬ್ಬಂದಿ ವರ್ಗ, ಸೀನಿಯರ್ ಮಂಜುಶ್ರೀ ಜೇಸಿ ನ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು, ವರ್ತಕರ ಸಂಘದ ಸದಸ್ಯರು, ರಾಜ ಕೇಸರಿ ಸಂಘಟನೆ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಸ್ವಾಗತಿಸಿ, ಲಯನ್ಸ್ ಮಾಜಿ ಪ್ರಾಂತ್ಯ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya
error: Content is protected !!