ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭವು ಇಂದ್ರಪ್ರಸ್ಥ ಸಭಾಂಗಣದಲ್ಲಿ ಅ. 1 ರಂದು ನಡೆಯಿತು.
ಮುಖ್ಯ ಅತಿಥಿಗಳಾಗಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಮತ್ತು ಶಶಿಕಿರಣ್ ಜೈನ್ ವಕೀಲರು ಬೆಳ್ತಂಗಡಿ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು. ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ವಹಿಸಿದ್ದರು, ಎಸ್. ಡಿ. ಎಂ.ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್, ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ನಿತಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಪಂದ್ಯಾಟದಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನವನ್ನು ಎಸ್. ಡಿ. ಎಂ ಪಾಲಿಟೆಕ್ನಿಕ್ ಉಜಿರೆ, ದ್ವಿತೀಯ ಸ್ಥಾನವನ್ನು ಕೆ.ವಿ.ಜಿ ಪಾಲಿಟೆಕ್ನಿಕ್ ಸುಳ್ಯ ಪಡೆದುಕೊಂಡಿತು. ವೈಯಕ್ತಿಕ ವಿಭಾಗದಲ್ಲಿ ಉತ್ತಮ ದಾಳಿಗಾರನಾಗಿ ಆಕಾಶ್ ಕೆ. ವಿ.ಜಿ. ಪಾಲಿಟೆಕ್ನಿಕ್ ಸುಳ್ಯ , ಉತ್ತಮ ಹಿಡಿತಗಾರನಾಗಿ ಜಿಯಾದ್ ಕೆ. ವಿ. ಜಿ. ಪಾಲಿಟೆಕ್ನಿಕ್ ಸುಳ್ಯ, ಉತ್ತಮ ಸವ್ಯಸಾಚಿ ಆಟಗಾರನಾಗಿ ನಿರಂಜನ್ ಎಸ್.ಡಿ.ಎಂ. ಪಾಲಿಟೆಕ್ನಿಕ್ ಉಜಿರೆ ಇವರು ಪಡೆದುಕೊಂಡಿರುತ್ತಾರೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಉಪನ್ಯಾಸಕ ಸಂಪತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.