37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

ಉಜಿರೆ: ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರು ಸಾತ್ವಿಕ ಬದುಕು ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಂಡು ನಾಯಕರಾದವರು. ಅಂತಹ ಮಹಾನ್ ವ್ಯಕ್ತಿಗಳ ಜಯಂತಿಯಂದು ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಸ್ತುತ್ಯರ್ಹ. ಪ್ರತಿಯೊಬ್ಬರಲ್ಲೂ ಸ್ವಚ್ಛತೆಯ ಅರಿವು ಹಾಗೂ ಜಾಗೃತಿ ಅಗತ್ಯವಾಗಿದೆ. ನಾವು ಬದಲಾದರೆ ಸಮಾಜ ಹಾಗೂ ದೇಶವೇ ಬದಲಾಗುತ್ತದೆ. ಒಟ್ಟಾರೆ ಸ್ವಚ್ಛ ಪರಿಸರ ಸ್ವಸ್ಥ ಜೀವನಕ್ಕೆ ನಾಂದಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೋವರ್ಸ್ ಹಾಗೂ ರೇಂಜರ್ಸ್ ಮತ್ತು ಜೂನಿಯರ್ ರೆಡ್ ಕ್ರಾಸ್ ಗಳ ಸಹಯೋಗದಲ್ಲಿ ಗಾಂಧೀ ಹಾಗೂ ಶಾಸ್ತ್ರೀ ಜಯಂತಿ ಅಂಗವಾಗಿ ನಡೆದ ಸ್ವಚ್ಛತಾ ಪ್ರತಿಜ್ಞೆ ಹಾಗೂ ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಯಿತು. ಎಲ್ಲ ಸಂಯೋಜಕ ಘಟಕಗಳ ವಿದ್ಯಾರ್ಥಿ ಸ್ವಯಂ ಸೇವಕರು ಉಜಿರೆಯ ಪರಿಸರವನ್ನು ಜಾಥಾ ಹಾಗೂ ಅಭಿಯಾನ ನಡೆಸಿ ಸ್ವಚ್ಛತಾ ಕಾರ್ಯ ಮಾಡಿದರು.

ರಾ. ಸೇ. ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿಗಳಾದ ಲಕ್ಷ್ಮೀಶ ಭಟ್ ಹಾಗೂ ಅಂಕಿತಾ, ರೆಡ್ ಕ್ರಾಸ್ ಸಂಯೋಜಕರಾದ ಅರ್ಚನಾ ಹಾಗೂ ಕವನಶ್ರೀ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿ ವಂದಿಸಿದರು.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!